-->
Bookmark

Bagalakote : ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಮಹಾರಾಜರ ಹೆಸರಿಡಿ : ನಮ್ಮ ಕರ್ನಾಟಕ ಸೇನೆ ಬಾಗಲಕೋಟೆ ಜಿಲ್ಲಾಧ್ಯಕ್ಷ ರಾಹುಲ್ ಶೆಟ್ಟರ್ ಒತ್ತಾಯ

Bagalakote : ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಮಹಾರಾಜರ ಹೆಸರಿಡಿ : ನಮ್ಮ ಕರ್ನಾಟಕ ಸೇನೆ ಬಾಗಲಕೋಟೆ ಜಿಲ್ಲಾಧ್ಯಕ್ಷ ರಾಹುಲ್ ಶೆಟ್ಟರ್  ಒತ್ತಾಯ

ಬಾಗಲಕೋಟೆ : (Sept_26_2025)
ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಮಹಾರಾಜರ ಹೆಸರಿಡಬೇಕೆಂದು ನಮ್ಮ ಕರ್ನಾಟಕ ಸೇನೆ ಬಾಗಲಕೋಟೆ ಜಿಲ್ಲಾಧ್ಯಕ್ಷರಾದ ರಾಹುಲ್ ಶೆಟ್ಟರ ಒತ್ತಾಯಿಸಿದ್ದಾರೆ. ಬಾಗಲಕೋಟೆ ನಗರದಲ್ಲಿ ಮಾತನಾಡಿದ ಅವರು, ಆರು ವರ್ಷಗಳ ನಿರಂತರ ಹೋರಾಟದ ಪ್ರತಿಫಲವಾಗಿ ರಾಜ್ಯ ಸರ್ಕಾರ ಬಾಗಲಕೋಟೆ ಜಿಲ್ಲೆಗೆ ಘೋಷಣೆಯಾದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ 450 ಕೋಟಿ ರೂಪಾಯಿ ಅನುದಾನ ನೀಡಲು ಅನುಮೋದನೆ ನೀಡಿದ್ದು, ಸ್ವಾಗತಾರ್ಹ ಎಂದರು. 

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆದ ಎಲ್ಲ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದು, ಎಲ್ಲ ಅಡೆತಡೆಗಳನ್ನು ಎದುರಿಸಿ ಮುನ್ನಡೆದದ್ದು, ಇಂದು ಸಾರ್ಥಕತೆಯ ಆನಂದ ತಂದಿದೆ ಎಂದು ರಾಹುಲ್ ಭಾವುಕರಾಗಿ ಮಾತನಾಡಿದರು. ಅಲ್ಲದೇ, ಎಲ್ಲ ಹೋರಾಟಗಳಲ್ಲಿ ಭಾಗವಹಿಸಿದ ಅಸಂಖ್ಯಾತ ಕನ್ನಡ ಸೇನಾನಿಗಳಿಗೆ, ವಿವಿಧ ಸಂಘಟನೆಗಳ ಮುಖಂಡರುಗಳಿಗೆ, ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಬೆಂಬಲ ನೀಡಿದ ಬಾಗಲಕೋಟೆಯ ಜನತೆಗೆ ಮತ್ತು ರಾಜ್ಯ ಸರ್ಕಾರಕ್ಕೆ, ಸಚಿವರುಗಳಿಗೆ ಹಾಗೂ ಬಹು ಮುಖ್ಯವಾಗಿ ಬಾಗಲಕೋಟೆ ಶಾಸಕರಾದ ಸನ್ಮಾನ್ಯ ಹೆಚ್. ವೈ. ಮೇಟಿ ಅವರಿಗೆ ಅನಂತ ಅನಂತ ಧನ್ಯವಾದಗಳನ್ನ ಶೆಟ್ಟರ್ ಅರ್ಪಿಸಿದರು. 

ಈ ಮಧ್ಯೆ, ಮುಂದಿನ ದಿನಗಳಲ್ಲಿ ಆರಂಭವಾಗುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಮಹಾರಾಜರ ಹೆಸರಿಡಬೇಕೆಂದು ರಾಜ್ಯ ಸರ್ಕಾರವನ್ನು ಇದೇ ವೇಳೆ ಒತ್ತಾಯಿಸಿದರು.
Post a Comment

Post a Comment