-->
Bookmark

Ron : ಗ್ರಾಮೀಣ ಭಾಗದ ಮಹಿಳೆಯರಿಗೆ, ಮಕ್ಕಳಿಗೆ ಪೊಷಣ ಅಭಿಯಾನ ಸಹಕಾರಿ : ಮಿಥುನ್‌ ಪಾಟೀಲ್

Ron : ಗ್ರಾಮೀಣ ಭಾಗದ ಮಹಿಳೆಯರಿಗೆ, ಮಕ್ಕಳಿಗೆ ಪೊಷಣ ಅಭಿಯಾನ ಸಹಕಾರಿ :  ಮಿಥುನ್‌ ಪಾಟೀಲ್ 

ರೋಣ : (Oct_15_2025)
ಮಕ್ಕಳು, ಹದಿಹರೆಯದ ಹುಡುಗಿಯರು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಿಗೆ ಪೌಷ್ಟಿಕಾಂಶದ ಫಲಿತಾಂಶಗಳನ್ನು ಸುಧಾರಿಸಲು ಮತ್ತು ಯೋಜನೆ ಯಥಾವತ್ತಾಗಿ ಜಾರಿಗೆ ಸರ್ಕಾರ ಸಿದ್ಧವಿದೆ. ಸರ್ಕಾರದ ಈ ಯೋಜನೆಯಿಂದ ತಾಲೂಕಿನಲ್ಲಿ ಪೋಷಣ ಅಭಿಯಾ‌ನ ಕಾರ್ಯಕ್ರಮ ಯಶಸ್ವಿಯಾಗಿದೆ‌ ಎಂದು ರೋಣ ಪುರಸಭೆ ಸದಸ್ಯರು ಮತ್ತು ಗ್ಯಾರಂಟಿ ಯೋಜನೆಯ ತಾಲೂಕಾ ಸಮಿತಿ ಅಧ್ಯಕ್ಷರಾದ ಮಿಥುನ್‌ ಪಾಟೀಲ್ ಹೇಳಿದರು.  ರೋಣ ಪಟ್ಟಣದಲ್ಲಿ ನಡೆದ ತಾಲೂಕಾ ಪೋಷಣ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು, ಮಕ್ಕಳು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರಿಗೆ ಈ ಯೋಜನೆ ಅನುಕೂಲವಾಗಿದೆ ಎಂದು ತಿಳಿಸಿದರು. ಅಪೌಷ್ಟಿಕತೆ, ಕುಂಠಿತ ಬೆಳವಣಿಗೆ ಮತ್ತು ರಕ್ತಹೀನತೆಯನ್ನು ಕಡಿಮೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಗ್ರಾಮೀಣ ಭಾಗದ ಮಹಿಳೆಯರು ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಾಗಿದ್ದಾರೆ ಎಂದು ಅಭಿಪ್ರಾಯ ಪಟ್ಟರು. 

ಕಾರ್ಯಕ್ರಮದಲ್ಲಿ ರೋಣ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಕಂದಕೂರು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶಿವಂಗಂಗಮ್ಮ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರೂಪಾಕ್ಷಯ್ಯ ಹಿರೇಮಠ, ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಫಲಾನುಭವಿಗಳು ಹಾಜರಿದ್ದರು.
Post a Comment

Post a Comment