-->
Bookmark

Bengaluru : “ಪ್ರೇಮ್ ಲವ್ ನಂದಿನಿ” ಚಲನಚಿತ್ರದ ಪೋಸ್ಟರ್ ಬಿಡುಗಡೆ

Bengaluru : “ಪ್ರೇಮ್ ಲವ್ ನಂದಿನಿ” ಚಲನಚಿತ್ರದ ಪೋಸ್ಟರ್ ಬಿಡುಗಡೆ 
ಬೆಂಗಳೂರು : (17_01_2026)
ಹೊಸ ವರ್ಷಕ್ಕೆ ಹೊಸ ಪ್ರತಿಭೆಗಳ ತಂಡವೊಂದು “ಪ್ರೇಮ್ ಲವ್ ನಂದಿನಿ” ಹೊಸ ಚಿತ್ರ ಮಾಡುವ ಮೂಲಕ ಸಂಪೂರ್ಣ ಚಿತ್ರೀಕರಣ ಮುಗಿಸಿದ್ದಾರೆ.
    ಹೌದು, ಜೀ ಕನ್ನಡ ವಾಹಿನಿಯಲ್ಲಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಬಸವರಾಜ ನಂದಿ ಅವರ ನಿರ್ಮಾಣದಲ್ಲಿ, ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ ಸುಧಾ ಅಣ್ಣಾಶೇಠ. •ವಾಸ್ತವದ ಕಥೆ ಹೇಳುವ ನಾಯಕನಾಗಿ ಪತ್ರಕರ್ತ ಹಾಗೂ ನಟ ವಿಶ್ವಪ್ರಕಾಶ ಟಿ ಮಲಗೊಂಡ, ಸಿರಿ ವೆಂಕಟೇಶ್ ನಾಯಕಿಯಾಗಿ ಅಭಿನಯಿಸಿದ “ಪ್ರೇಮ್ ಲವ್ ನಂದಿನಿ” ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ ಚಿತ್ರ ತಂಡ. ಕಾಮಿಡಿ ಕಿಲಾಡಿಗಳು ಖ್ಯಾತಿಯ ದೀಕ್ಷಿತ್, ಮಧು ಅರಕೆರೆ ಸಹ ಕಲಾವಿದರಾಗಿ ಅಭಿನಯಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ ತಿಂಗಳು ಚಿತ್ರ ಬಿಡುಗಡೆಯಾಗಲಿದೆ ಎನ್ನುತ್ತಾರೆ ನಿರ್ಮಾಪಕ ಬಸವರಾಜ ಎಸ್ ನಂದಿ.
    ಇತ್ತೀಚೆಗೆ ನಡೆಯುತ್ತಿರುವ ಪ್ರೇಮ ಕಥೆಯಿಂದ ಶುರುವಾಗಿ ಡಿವೋರ್ಸ್ ವರೆಗೆ ನಡೆಯುವ ಕಥೆಯೇ ಈ ಚಿತ್ರದ ಸಾರಾಂಶ. ಹೊಸ ಕಥೆ ಜೊತೆಗೆ ಸಾಮಾಜಿಕ ಸಂದೇಶ ನೀಡುವ ಚಿತ್ರ ಇದಾಗದೆ ಎನ್ನುತ್ತಾರೆ ನಿರ್ದೇಶಕಿ ಸುಧಾ ಅಣ್ಣಾಶೇಠ. ಚಿತ್ರಕ್ಕೆ ಬಸವರಾಜ ನಂದಿ ಹಾಗೂ ಸಚಿನ್ ಅವರ ಛಾಯಾಗ್ರಾಹಣವಿದ್ದು, ಪ್ರಜ್ವಲ್ ನಂದಿ ಸಂಕಲನ, ಕ್ರಿಯೇಟಿವ್ ಹೆಡ್ ಆಗಿ ಅಣ್ಣಾಶೇಠ, ಪ್ರಸಾದ ತೋಟದ ಪೋಸ್ಟರ್ ಡಿಸೈನ್, ಮೇಕಪ್ ಮಧು, ಹರೀಶ್ ಅರಸು, ಡಾ. ಪ್ರಭು ಗಂಜಿಹಾಳ, ಡಾ. ವೀರೇಶ್ ಹಂಡಿಗಿ, ಪತ್ರಿಕಾ ಸಂಪರ್ಕ, ಉಮೇಶ್ ಕೆ ಎನ್ ಪಬ್ಲಿಸಿಟಿ ಜವಾಬ್ದಾರಿ ಹೊತ್ತಿದ್ದು, ನಿಂಗರಾಜ ಕಟ್ಟಿಗೇರಿ   ಅನೇಕರು ತಂತ್ರಜ್ಞರು ಚಿತ್ರದಲ್ಲಿದ್ದಾರೆ.
**
-ಡಾ.ಪ್ರಭು ಗಂಜಿಹಾಳ
 ಮೊ:೯೪೪೮೭೭೫೩೪೬
Post a Comment

Post a Comment