Gajendragad : ಡೊನೇಷನ್ ಹಾವಳಿ ತಡೆಗಟ್ಟಿ, & ಅನಧಿಕೃತ ಬೇಸಿಗೆ ತರಬೇತಿ ಶಿಬಿರದ ಮೇಲೆ ಸೂಕ್ತ ಕಾನೂಕು ಕ್ರಮ ಕೈಗೊಳ್ಳಿ : ಎಸ್ ಎಫ್ ಐ
ಗಜೇಂದ್ರಗಡ : (May_07_2026)
ತಾಲೂಕಿನ ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ ಎಫ್ ಐ ಗಜೇಂದ್ರಗಡ ತಾಲೂಕ ಸಮಿತಿ ನೇತೃತ್ವದಲ್ಲಿ 2026-27 ನೇ ಸಾಲಿನಲ್ಲಿ ಪ್ರಾರಂಭವಾಗುವ ಅನುದಾನಿತ , ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಾತಿ ದಿನಾಂಕವನ್ನು ರಾಜ್ಯ ಸರಕಾರ ಇನ್ನೂ ನಿಗದಿ ಪಡಿಸಿಲ್ಲ. ಹೀಗಿರುವಾಗಲೇ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶ ಪ್ರಕ್ರಿಯೆಗಳನ್ನು ಪ್ರಾರಂಭಿಸಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ನೀತಿ-ನಿಯಮಗಳನ್ನು ಮೀರಿ ಡೊನೇಷನ್ ವಸೂಲಿಯಲ್ಲಿ ತೊಡಗಿವೆ. ಸೀಟುಗಳ ಲಭ್ಯತೆ, ಸಂಗ್ರಹಿಸಬೇಕಾದ ಶುಲ್ಕ, ಪಾಲಿಸಬೇಕಾದ ಮೀಸಲಾತಿ, ನಿಯಮಗಳ ಕುರಿತು ಶಿಕ್ಷಣ ಇಲಾಖೆ ಅನೇಕ ಸುತ್ತೋಲೆ ಹೊರಡಿಸಿದರೂ ಖಾಸಗಿ ಶಾಲೆಗಳು ಎಗ್ಗಿಲ್ಲದೆ ವಸೂಲಿಯಲ್ಲಿ ತೊಡಗುವ ಮೂಲಕ ನಿಯಮಗಳನ್ನು ಉಲ್ಲಂಘಿಸಿ ಆದೇಶಗಳಿಗೆ ಬೆಲೆ ನೀಡಲ್ಲ. ಈ ಮೂಲಕ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿವೆ. ಅದನ್ನು ಖಂಡಿಸಿ ಎಸ್ ಎಫ್ ಐ ಸಂಘಟನೆ ಮಾನ್ಯ ಶಿರಸ್ತಿದಾರರಾದ ಶ್ರೀ ಶೀವಾಲಲ್ ನಾಯಕ್ ಅವರ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷರಾದ ಚಂದ್ರು ರಾಠೋಡ್ ಮಾತನಾಡಿ, ಕಾಳ ಸಂತೆಯಲ್ಲಿ ಶಿಕ್ಷಣ ಮಾರಾಟವಾಗುತ್ತಿದೆ. ಜಿಲ್ಲೆಯಾದ್ಯಂತ ನಾಯಿ ಕೊಡೆಗಳಂತೆ ಖಾಸಗಿ ಶಾಲೆಗಳು, ಶಿಕ್ಷಣ ಸಂಸ್ಥೆಗಳು ತಲೆ ಎತ್ತುತ್ತಿವೆ. ಒಂದೆಡೆ ರಾಜ್ಯದಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿವೆ. ಜಿಲ್ಲೆಯಲ್ಲಿ ಈಗಾಗಲೇ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೆಸರಲ್ಲಿ ಡೋನೆಷನ್ ಮನಬಂದತೆ ಪ್ರಾರಂಭವಾಗಿದೆ. ಬಡ, ಹಿಂದುಳಿದ, ದಲಿತ, ಅಲ್ಪಸಂಖ್ಯಾತರ ಮಕ್ಕಳು ಖಾಸಗಿ ಶಾಲೆಗಳಲ್ಲಿ ಡೋನೆಷನ್ ಪಿಡುಗಿನಿಂದ ಶಾಲೆಗಳಲ್ಲಿ ಓದುವುದು ತುಂಬಾ ದುರದೃಷ್ಟಕರ ವಾಗಿದೆ. ಶಿಕ್ಷಣ ಹಕ್ಕು ಕಾಯ್ದೆ 1983 ಮತ್ತು 2009ರ ಆರ್.ಟಿ.ಇ ಕಾಯ್ದೆ ಜಾರಿಯಾದರೂ ಜಿಲ್ಲೆಯಲ್ಲಿ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ ಎಂದು ಆರೋಪಿಸಿದರು. ಆರ್.ಟಿ.ಇ ಸೀಟು ಮಧ್ಯವರ್ತಿಗಳ ಪಾಲಾಗುತ್ತಿವೆ. ಜಿಲ್ಲೆಯ ಬಹುತೇಕ ಖಾಸಗಿ ಶಾಲೆಗಳಲ್ಲಿ 30 ರಿಂದ 1 ಲಕ್ಷ ರೂ ವರೆಗೂ ಡೊನೇಷನ್ ವಸೂಲಿ ಮಾಡುವುದರ ಮೂಲಕ ಹಗಲು ದರೋಡೆ ನಡೆದಿದೆ. ಹಾಗೂ ಅಕ್ರಮವಾಗಿ ಟ್ಯುಷನ್, ಟ್ಯೂಟೊರಿಯಲ್, ಅನದೀಕೃತವಾಗಿ ICSC, CBSC ಹೆಸರಿನಲ್ಲಿ ಶಾಲೆಗಳು ನಡೆಯುತ್ತೀವೆ. ಸಮ್ಮರ್ ಕ್ಯಾಂಪ್ (ಬೇಸಿಗೆ ತರಬೇತಿ ಕೇಂದ್ರ) ಗಳ" ಇತ್ಯಾದಿ ಹೆಸರುಗಳಲ್ಲಿ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಿ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ ಹಗಲೂ ದರೋಡೆ ಮಾಡುತ್ತಿದ್ದು ಸಂಬಂಧಿಸಿದ ಅಧಿಕಾರಿಗಳು ಮೌನ ವಹಿಸಿರುವುದೇಕೆ ಎಂದು ಪ್ರಶ್ನಿಸಿದರು.
ಸರ್ಕಾರ ನಿಯಮಗಳ ಪ್ರಕಾರ ಅನುದಾನಿತ ಶಿಕ್ಷಣ ಸಂಸ್ಥೆಗಳು 500 ರೂ. ಅನುದಾನರಹಿತ ಶಿಕ್ಷಣ ಸಂಸ್ಥೆಗಳು ರೂ.600 ಗಳನ್ನು ಮಾತ್ರ ಅಭಿವೃದ್ಧಿ ಶುಲ್ಕ (ಡೆವಲಪ್‌ಮೆಂಟ್ ಫೀ)ನ್ನು ಸಂಗ್ರಹಿಸಲು ಅವಕಾಶವಿದೆ. ಈ ಹಣವನ್ನು ಒತ್ತಾಯದ ಮೂಲಕ ಸಂಗ್ರಹಿಸುವಂತಿಲ್ಲ. ಇದಕ್ಕೂ ಹೆಚ್ಚು ಸಂಗ್ರಹಿಸುವುದು ಕಾನೂನಿನ ಪ್ರಕಾರ ಅಪರಾಧ. ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರಾರಂಭಿಕ ತರಗತಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸಬಾರದು ಎಂದು ಶಿಕ್ಷಣ ಹಕ್ಕು ಕಾಯ್ದೆ 2009ರ ಸೆಕ್ಷನ್ 13(2)(ಬಿ) ಹೇಳುತ್ತದೆ. ಪ್ರವೇಶ ಪರೀಕ್ಷೆ ನಡೆಸುವ ಶಾಲೆಗಳಿಗೆ 25 ಸಾವಿರ ರೂ ದಂಡ ಹಾಕಬೇಕೆಂದು ಹೇಳಿದೆ.
ವಿದ್ಯಾರ್ಥಿಗಳ ಸಂಖ್ಯೆ, ಕಲಿಕಾ ಮಾಧ್ಯಮ, ಶುಲ್ಕದ ವಿವರ, ಕ್ರೀಡಾಂಗಣ, ಶೌಚಾಲಯ, ಶಿಕ್ಷಕರ ಸಂಖ್ಯೆ, ಮುಂತಾದ ಮಾಹಿತಿಯನ್ನು ಶಾಲಾ ಆವರಣದಲ್ಲಿ 10x6 ಸೈಜಿನಲ್ಲಿ ಫೆಕ್ಸ್ ಪ್ರಕಟಿಸಬೇಕೆಂದು ಹಾಗೂ ಇದೇ ಮಾಹಿತಿಯನ್ನು ಇಲಾಖೆಯ ವೆಬ್ ಸೈಟ್‌ನಲ್ಲಿ ಪ್ರಕಟಿಸಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಆದ್ರೆ, ಇದನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಜಾರಿ ಮಾಡಿಲ್ಲ. ಸರ್ಕಾರದ ಸುತ್ತೋಲೆಯಲ್ಲಿ ಡಿ.ಡಿ.ಪಿ ಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇದನ್ನು ಪರೀಶಿಲಿಸಬೇಕೆಂದು ಹೇಳಿದ್ದರೂ, ಇಲಾಖಾ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಣಿದು ಸರಿಯಾಗಿ ಪರೀಶಿಲನೆ ಮಾಡಿರುವುದಿಲ್ಲ. ಇದರಿಂದಾಗಿ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಸುವುದರ ಜೊತೆಗೆ ನೋಟ್ ಬುಕ್, ಶಾಲಾ ಬ್ಯಾಗ್, ಬೂಟು, ಬಟ್ಟೆ, ಜಾಮಿಟ್ರಿ ಬಾಕ್ಸ್ ಕಡ್ಡಾಯವಾಗಿ ಆಯಾ ಶಾಲೆಗಳಲ್ಲಿ ತೆಗೆದುಕೊಳ್ಳಬೇಕೆಂದು ಪಾಲಕರಿಗೆ ಹೇಳಿ ಹೆಚ್ಚಿನ ದರದಲ್ಲಿ ಕೊಟ್ಟು ಶಾಲೆಗಳನ್ನು ಅಂಗಡಿಯಾಗಿ ಮಾರ್ಪಟ್ಟು ಮಾಡಿದ ಶಾಲೆಗಳ ವಿರುದ್ಧ ಮಾನ್ಯತೆಯನ್ನು ರದ್ದು ಮಾಡಿ ಮತ್ತು ಜಿಲ್ಲೆಯ ಬಹುತೇಕ ಶಾಲೆಗಳು ಆಯುಕ್ತರ ಆದೇಶವನ್ನು ಉಲ್ಲಂಘಿಸಿದ್ದು, ಅಂತಹ ಶಾಲೆಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ಮುಚ್ಚಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಮತ್ತು ಈ ಕೂಡಲೇ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ಸಭೆ ಸೇರಲು ಎಸ್.ಎಫ್.ಐ ಗಜೇಂದ್ರಗಡ ತಾಲೂಕು ಸಮಿತಿಯು ತಿಳಿಸುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷರಾದ ಚಂದ್ರು ರಾಠೋಡ್, ಶಿರಸ್ತಿದಾರರಾದ ಶ್ರೀ ಶೀವಾಲಲ್ ನಾಯಕ್, ಎಸ್ ಎಫ್ ಐ ತಾಲೂಕು ಅಧ್ಯಕ್ಷರಾದ ಅನಿಲ್ ಆರ್, ಶರಣಪ್ಪ ಮಾಟರಂಗಿ, ಕವಿತಾ ಹೊಸಮನಿ, ಗುರುಕಿರಣ್, ಶೀವರಾಜ್, ಗಣೇಶ್, ಪ್ರಸನ್ನ ಮೂರ್ತಿ, ಪ್ರೇಮಕುಮಾರ್, ರೇವಣ್ಣ, ಇದ್ದರು.



Post a Comment