-->
Bookmark

New Delhi : 2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಗೃಹ ಬಳಕೆ ಸಿಲಿಂಡರ್ ಬೆಲೆ ಇಳಿಕೆ

New Delhi : 
2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಗೃಹ ಬಳಕೆ ಸಿಲಿಂಡರ್ ಬೆಲೆ ಇಳಿಕೆ 
2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕೇಂದ್ರ ಸರ್ಕಾರ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ₹200 ರೂಪಾಯಿ ಇಳಿಕೆ ಮಾಡಿರುವುದಾಗಿ ಘೋಷಿಸಿದೆ.

ಕೇಂದ್ರ ಸಚಿವ ಸಂಪುಟ ಈ  ತೀರ್ಮಾನವನ್ನ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ
ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಕೂರ್, “ಓಣಂ ಮತ್ತು ರಕ್ಷಾಬಂಧನ್ ಹಬ್ಬದ ಸಂದರ್ಭದಲ್ಲಿ, ಎಲ್ಲ ಗ್ರಾಹಕರಿಗೆ ಎಲ್‌ಪಿಜಿ ದರವನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ” ಎಂದು ಹೇಳಿದ್ದಾರೆ.

ಬಿಪಿಎಲ್ ಕಾರ್ಡ್​ದಾರರಿಗೆ ನೀಡಲಾಗುವ ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಎಲ್​ಪಿಜಿ ಸಿಲಿಂಡರ್​ಗಳ ಮೇಲೂ ಕೂಡ ಹೆಚ್ಚುವರಿ 200 ರೂ. ನಷ್ಟು ಸಬ್ಸಿಡಿ ಕೊಡಲು ನಿರ್ಧರಿಸಿದೆ. ಆ ಮೂಲಕ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಈ ಮೊದಲು ನೀಡುತ್ತಿದ್ದ 200 ರೂ ಸಬ್ಸಿಡಿ ದರವನ್ನ ಹೆಚ್ಚಳ ಮಾಡಿದ್ದು, ಈಗ 400 ರೂ. ಸಬ್ಸಿಡಿ ದೊರೆಯಲಿದೆ. ಕೇಂದ್ರ ಸಂಪುಟ ಸಭೆಯಲ್ಲಿ ಈ ಕ್ರಮಕ್ಕೆ ಅನುಮೋದನೆ ಸಿಕ್ಕಿದೆ ಎಂದು ಅನುರಾಗ್ ಠಾಕೂರ್ ಎಎನ್ಐ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ. 

Post a Comment

Post a Comment