ಗಜೇಂದ್ರಗಡ : ( Dec_27_2023)
ಇತ್ತೀಚಿಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿರುವ ಹಿಂದೂ ಸಂಘಟನೆ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ಸರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅಂಜುಮಾನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಒತ್ತಾಯಿಸಿದರು.
ನಮ್ಮ ನಾಡು ಸರ್ವ ಜನಾಂಗದ ಶಾಂತಿಯ ತೋಟವಿದ್ದಂತೆ, ಇಂತಹ ನಾಡಿನಲ್ಲಿ ಮಹಿಳೆಯರಿಗೆ ಪೂಜನೀಯ ಸ್ಥಾನ, ಗೌರವ ನೀಡಲಾಗಿದೆ. ಯಾವುದೇ ಧರ್ಮ, ಜಾತಿಯ ಮಹಿಳೆಯರನ್ನು ಹೀಗೆ ಅವಹೇಳನ ಮಾಡುವುದು ಸರಿಯಾದ ಕ್ರಮವಲ್ಲ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡಲು ಪ್ರಯತ್ನಿಸುವ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಹಿಂಜರಿಯಬಾರದು.
ಈ ಘಟನೆ ನಡೆದು ಎರಡ್ಮೂರು ದಿನಗಳಾದ್ರೂ ಇದುವರೆಗೂ ಸರ್ಕಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಲ್ಲಿ ವಿಫಲವಾಗಿದ್ದು ಮಹಿಳೆಯರ ಬಗ್ಗೆ ಸರ್ಕಾರಕ್ಕಿರುವ ನಿರ್ಲಕ್ಷ್ಯ ಧೋರಣೆಯನ್ನು ಎತ್ತಿ ತೋರಿಸುತ್ತಿದೆ ಎಂದು ಸರ್ಕಾರದ ನಡೆಯನ್ನು ಖಂಡಿಸಿದರು.
ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡ ಇದ್ದ, ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡಂದಿರು ಸಿಕ್ಕಿದ್ದಾರೆ ಎಂದು ಹೇಳುವ ಮೂಲಕ ಕಲ್ಲಡ್ಕ ಪ್ರಭಾಕರ ಭಟ್ಟ ನಮ್ಮ ಸಮುದಾಯದ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ. ಈ ರೀತಿಯ ಹೇಳಿಕೆಯಿಂದ ನಮ್ಮ ಸಮುದಾಯದ ಮಹಿಳೆಯರಿಗೆ ನೋವುಂಟು ಮಾಡಿದೆ. ಸರ್ಕಾರಕ್ಕೆ ಮಹಿಳೆಯರ ಮೇಲೆ ಕಾಳಜಿ ಇದ್ದರೆ ಕೂಡಲೇ ಈ ಕಲ್ಲಡ್ಕ ಪ್ರಭಾಕರ ಭಟ್ಟ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಅಂಜುಮಾನ್ ಇಸ್ಲಾಂ ಕಮೀಟಿ ಕಾರ್ಯದರ್ಶಿ ಫಯಾಜ್ ತೋಟದ ಒತ್ತಾಯಿಸಿದರು.
Post a Comment