ರಾಜು ಸಾಂಗ್ಲಿಕರ್ ಅವರನ್ನ ಖನಿಜ ನಿಗಮ ಮಂಡಳಿ ಅಧ್ಯಕ್ಷರಾದ ಜಿ.ಎಸ್ ಪಾಟೀಲ್ ಅವರು, ಸಮುದಾಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರನ್ನಾಗಿ ನೇಮಿಸಿ, ಆದೇಶ ಹೊರಡಿಸಿದ್ದಾರೆ.
ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದವರಾದ ಸಾಂಗ್ಲಿಕರ್ ಪಕ್ಷದ ನಿಷ್ಟಾವಂತ ಕಾರ್ಯಕರ್ತ ಅವರ ಕೆಲಸ ಕಾರ್ಯವನ್ನ ಮೆಚ್ಚಿ ಹೊಸ ಜವಾಬ್ದಾರಿಯನ್ನ ನೀಡಿದ್ದಾರೆ.
ಗಜೇಂದ್ರಗಡ ಸಮುದಾಯ ಆರೋಗ್ಯ ಕೇಂದ್ರ ಬಹಳಷ್ಟು ವೇಗದಲ್ಲಿ ಬೆಳೆಯುತ್ತಿದೆ. ಹಲವಾರು ವೈದ್ಯರು ನೇಮಕಗೊಂಡಿದ್ದಾರೆ. ತಾಲೂಲಾದರೂ ನೂರು ಹಾಸಿಗೆ ಆಸ್ಪತ್ರೆ ಆಗಿಲ್ಲ ಎಂಬ ಕೂಗು ಇದೆ. ಮುಂಬರುವ ದಿನಗಳಲ್ಲಿ ಜನರ ಆಶೋತ್ತರಗಳನ್ನ ಈಡೇರಿಸುವ ಭರವಸೆ ಜನಸಾಮಾನ್ಯರಲ್ಲಿ ಮೂಡಿದೆ.
ಗಜೇಂದ್ರಗಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಪ್ರತಿ ನಿತ್ಯ ನೂರಾರು ಮಂದಿ ಆಗಮಿಸುತ್ತಾರೆ. ಸುತ್ತಮುತ್ತಲ ಹತ್ತಾರು ಹಳ್ಳಿಗಳ ಜನರು ಆರೋಗ್ಯ ತಪಾಸಣೆಗೆ ಬರುತ್ತಾರೆ. ಅವರೆಲ್ಲರಿಗೂ ಇನ್ನೂ ಉತ್ತಮ ಆರೋಗ್ಯ ಸೇವೆ ನೀಡಲು ಸಜ್ಜಾಗಿದ್ದೇವೆ ಎಂದು ನೂತನವಾಗಿ ಆಯ್ಕೆಯಾದ ಆರೋಗ್ಯ ರಕ್ಷಾ ಸಮಿತಿ ಸದಸ್ಯ ರಾಜು ಸಾಂಗ್ಲಿಕರ್ ಕಿರಾ ನ್ಯೂಸ್ ನೊಂದಿಗೆ ತಮ್ಮ ಅನಿಸಿಕೆ ಹಂಚಿಕೊಂಡರು.
ಇದೇ ವೇಳೆ, ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಅನಿಲ್ ಕುಮಾರ್ ತೋಟದ್ ಅವರು, ರಾಜು ಸಾಂಗ್ಲಿಕರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Post a Comment