ಕಾರವಾರ: (Feb_19_2024)
ತಾಲ್ಲೂಕಿನ ಶಿರವಾಡದ ಸರ್ಕಾರಿ ಪ್ರೌಢಶಾಲೆಗೆ ಸೋಮವಾರ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟ ಪರಿಶೀಲಿಸಲು ತಾವೇ ವಿದ್ಯಾರ್ಥಿಗಳೊಂದಿಗೆ ಕುಳಿತು ಊಟ ಸವಿದರು.
ಆಗಾಗ ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸುವ ಜಿಲ್ಲಾಧಿಕಾರಿ ಶಿರವಾಡದ ಶಾಲೆಗೆ ಊಟದ ಸಮಯದಲ್ಲೇ ತೆರಳಿ ಪರಿಶೀಲಿಸಿದರು. ವಿದ್ಯಾರ್ಥಿನಿಯರೊಂದಿಗೆ ಶಾಲೆಯಲ್ಲಿರುವ ವ್ಯವಸ್ಥೆಗಳ ಕುರಿತು ಚರ್ಚಿಸಿದರು. ವಿದ್ಯಾರ್ಥಿನಿಯರ ಪಂಕ್ತಿಯಲ್ಲೇ ಕುಳಿತು ಅವರೊಟ್ಟಿಗೆ ಊಟ ಸವಿದರು. ಡಿಡಿಪಿಐ ಲತಾ ನಾಯಕ ಕೂಡ ಜತೆಗಿದ್ದರು.
“ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುವಂತೆ ಕ್ರಮವಹಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗುತ್ತಿತ್ತು. ಸರಿಯಾದ ಆಹಾರ ನೀಡುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಖುದ್ದು ಪರಿಶೀಲನೆ ನಡೆಸಲಾಯಿತು. ಆಹಾರದಲ್ಲಿ ಇನ್ನಷ್ಟು ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಲಾಗಿದೆ' ಎಂದು ಗಂಗೂಬಾಯಿ ಮಾನಕರ ತಿಳಿಸಿದರು.
Post a Comment