Bengaluru : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ : ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ, 9 ಕೋಟಿ ರೂ. ದಂಡ
ಬೆಂಗಳೂರು : ( Oct_26_2024)
ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ಮತ್ತು 9 ಕೋಟಿ ದಂಡ ವಿಧಿಸಿದೆ.
ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್ 24 ರಂದು ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿತ್ತು. ಇಂದು ಶಿಕ್ಷೆ ವಿಧಿಸಿದೆ. ದಂಡದ ಹಣವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯ ಆದೇಶಿಸಿದೆ.
ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅವರಿಗೆ ಮೊದಲ ಕೇಸ್ ಅಂದರೆ ಒಳಸಂಚು ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆ, ವಂಚನೆ ಪ್ರಕರಣದಲ್ಲಿ ಏಳು ವರ್ಷ ಶಿಕ್ಷೆ ಪ್ರಕಟವಾಗಿದೆ. ಅಲ್ಲದೆ ಕಳ್ಳತನ ಪ್ರಕರಣದಲ್ಲಿ 2 ವರ್ಷ ಜೈಲುಶಿಕ್ಷೆ ನೀಡಿ ಕೋರ್ಟ್ ಆದೇಶಿಸಿದೆ.
ನಿಯಮಗಳ ಪ್ರಕಾರ ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದ ಕಾರಣ ಸತೀಶ್ ಸೈಲ್ ಶಾಸಕ ಸ್ಥಾನವೂ ಅನರ್ಹಗೊಳ್ಳುವ ಸಾಧ್ಯತೆ ಇದೆ.
Post a Comment