-->
Bookmark

Naregal : ʼಸಮರ್ಪಿತʼ ಅಭಿನಂದನ ಗ್ರಂಥ ಲೋಕಾರ್ಪಣೆ ಸಮಾರಂಭ ಫೆ. 22ಕ್ಕೆ

Naregal : ʼಸಮರ್ಪಿತʼ ಅಭಿನಂದನ ಗ್ರಂಥ ಲೋಕಾರ್ಪಣೆ ಸಮಾರಂಭ ಫೆ. 22ಕ್ಕೆ

ಹಿರಿಯ ವೈದ್ಯ ಡಾ. ಜಿ. ಕೆ. ಕಾಳೆಯವರ ಅಮೃತ ಮಹೋತ್ಸವ ಕಾರ್ಯಕ್ರಮ

ನರೇಗಲ್ :‌ (Feb_18_2026)
ಪಟ್ಟಣದ ಹಿರಿಯ ವೈದ್ಯ ಡಾ. ಜಿ. ಕೆ. ಕಾಳೆಯವರ ಮತ್ತು ಭಾಗ್ಯವತಿ ಅನಿಲ ಕಾಳೆಯವರ 75ನೇ ವರ್ಷದ  ಅಮೃತ ಮಹೋತ್ಸವದ ಸವಿನೆನಪಿಗಾಗಿ ಅಭಿನಂದನ ಗ್ರಂಥದ ಲೋಕಾರ್ಪಣೆ ಕಾರ್ಯಕ್ರಮವನ್ನು ಫೆಬ್ರುವರಿ 22ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಸಮೀಪದ ಕೋಡಿಕೊಪ್ಪದ ವೀರಪ್ಪಜ್ಜನ ಮಠದಲ್ಲಿ ಆಯೋಜನೆ ಮಾಡಿದ್ದಾರೆ. ಡಾ. ಜಿ. ಕೆ. ಕಾಳೆಯವರ ವೈದ್ಯಕೀಯ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಮತ್ತು ಕೃಷಿಕ ಸಾಧನೆಗಳು ಮುಂದಿನ ಪೀಳಿಗೆಗೆ ಪರಿಚಯವಾಗಲಿ ಎನ್ನುವ ಉದ್ದೇಶದೊಂದಿಗೆ ಕುಟುಂಬಸ್ಥರು, ಅಭಿಮಾನಿಗಳು ಹಾಗೂ ಹಿತೈಶಿಗಳು ಬರೆದ ಲೇಖನಗಳ ಸರಮಾಲೆ ʼಸಮರ್ಪಿತʼ ಎನ್ನುವ ಗ್ರಂಥದ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. 
ಹಾಲಕೆರೆ ಅನ್ನದಾನೇಶ್ವರ ಸಂಸ್ಥಾನ ಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ, ರೋಣ ಗುಲಗಂಜಿ ಮಠದ ಗುರುಪಾದ ಸ್ವಾಮೀಜಿ, ನರೇಗಲ್‌ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯರ ಸ್ವಾಮೀಜಿ, ನಿಡಗುಂದಿಕೊಪ್ಪ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಸ್ವಾಮೀಜಿ ಹಾಗೂ ಸಿದ್ದನಕೊಳ್ಳದ ನಿರಂತರ ದಾಸೋಹ ಮಠದ ಡಾ. ಶಿವಕುಮಾರ ಸ್ವಾಮೀಜಿಯವರು ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಲಿದ್ದಾರೆ. ರೋಣ ಶಾಸಕ ಜಿ. ಎಸ್.‌ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಕಾನೂನು ನ್ಯಾಯ ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸದ್ಯೋಮ ಇಲಾಖೆಗಳ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವಾರದ ಡಾ. ಎಚ್.‌ ಕೆ. ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ದಿ ಸಮಿತಿ ಉಪಾಧ್ಯಕ್ಷರಾದ ಡಿ. ಆರ್.‌ ಪಾಟೀಲ ಅವರು ʼಸಮರ್ಪಿತʼ ಗ್ರಂಥವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕಳಕಪ್ಪ ಜಿ. ಬಂಡಿ, ವಿಧಾನ ಪರಿಷತ್‌ ಸದಸ್ಯ ಎಸ್.‌ ವಿ. ಸಂಕನೂರ, ಸಿದ್ದಪ್ಪ ಜಿ. ಬಂಡಿ, ರವೀಂದ್ರನಾಥ ದೊಡ್ಡಮೇಟಿ ಪಾಲ್ಗೊಳ್ಳಲಿದ್ದಾರೆ. ಬಾಗಲಕೋಟೆಯ ಅನಂತ ಕುಲಕರ್ಣಿ ಹಾಗೂ ಸಂಗಡಿಗರಿಂದ ಸಂಗೀತ ಸೇವೆ ನೀಡಲಿದ್ದಾರೆ. ನಂತರ ಡಾ. ಜಿ. ಕೆ. ಕಾಳೆಯವರಿಗೆ ಸಂಘ ಸಂಸ್ಥೆಗಳಿಂದ ಮತ್ತು ಅಭಿಮಾನಿಗಳಿಂದ ಗೌರವ ಸನ್ಮಾನಗಳು ನಡೆಯುತ್ತವೆ ಎಂದು ಕಾಳೆ ಪರಿವಾರದವರು ಮತ್ತು ಅಭಿಮಾನಿ ಬಳಗದವರು ಪ್ರಕಟಣೆಯಲ್ಲಿ ತಿಳಿಸಿದರು. 
Post a Comment

Post a Comment