-->
Bookmark

Gajendragad : ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಗಜೇಂದ್ರಗಡದ ವಿದ್ಯಾರ್ಥಿನಿಯರ ಸಾಧನೆ - ರಾಜ್ಯಮಟ್ಟಕ್ಕೆ ಆಯ್ಕೆ:

Gajendragad : ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಗಜೇಂದ್ರಗಡದ ವಿದ್ಯಾರ್ಥಿನಿಯರ ಸಾಧನೆ - ರಾಜ್ಯಮಟ್ಟಕ್ಕೆ ಆಯ್ಕೆ:

ಗಜೇಂದ್ರಗಡ : (Sept_26_2026)
ಜಗದ್ಗುರು ತೋಂಟದಾರ್ಯ ವಿಜ್ಞಾನ ಹಾಗೂ ವಾಣಿಜ್ಯ ಪಿ.ಯು ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿಯರಾದ ಕು. ಶ್ರೇಯಾ ಹಡಪದ ಮತ್ತು ಕು. ಅನುರಾಧಾ ನಿಡಶೇಸಿ ಅವರು ಗದಗ ನಗರದಲ್ಲಿ ಜರುಗಿದ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ

ವಿದ್ಯಾರ್ಥಿನಿಯರ ಚಾಣಾಕ್ಷತೆ, ಏಕಾಗ್ರತೆಗೆ ಈ ಪ್ರಶಸ್ತಿ ದೊರೆತಿದ್ದು, ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಕಾರ್ಯದರ್ಶಿ ಪ್ರೊ. ಶಿವಾನಂದ ಪಟ್ಟಣಶೆಟ್ಟರ, ಪ್ರಾಚಾರ್ಯ ಸಂಗಮೇಶ ಬಾಗೂರ ಹಾಗೂ ಸಿಬ್ಬಂದಿ ವರ್ಗದವರು ಇಬ್ಬರು ವಿದ್ಯಾರ್ಥಿನಿಯರನ್ನು ಅಭಿನಂದಿಸಿ, ಮುಂಬರುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ
Post a Comment

Post a Comment