ಗದಗ : (Oct_16_2026)
ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ ಭದ್ರತೆಗಾಗಿ ಒತ್ತಾಯಿಸಿ ೨೦೨೬ ಅಕ್ಟೋಬರ್-೧೫ ರಂದು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಗದಗ ಇವರ ಮೂಲಕ ಮಾನ್ಯ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.
ಭೀಮಶೆಟ್ಟಿ ಯಂಪಳ್ಳಿ ರಾಜ್ಯಾಧ್ಯಕ್ಷರು ಮಾತನಾಡಿ ಗದಗ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಳೆದ ೧೫-೨೦ ವರ್ಷಗಳಿಂದ ಕಡಿಮೆ ಸಂಬಳಕ್ಕೆ ವಸತಿ ನಿಲಯ-ಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಚತಾಗಾರರು, ಕಾವಲುಗಾರರು, ಡಿ ಗ್ರೂಪ್ ಅಟೆಂಡರ್, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್ಗಳು, ಹೊರಗುತ್ತಿ ಅತಿಥಿ ಶಿಕ್ಷಕರು ಯಾವುದೇ ಭದ್ರತೆ ಇಲ್ಲದೆ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿರುತ್ತಾರೆ. ಗುತ್ತಿಗೆದಾರರು, ವಾರ್ಡನ್ರವರು, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹೊರಗುತ್ತಿಗೆ ಸಿಬ್ಬಂದಿಗಳನ್ನು ಶೋಷಣೆ ಮಾಡುತ್ತಿರುತ್ತಾರೆ. ಮನಸ್ಸಿಗೆ ಬಂದ ಹಾಗೆ ಕೆಲಸದಿಂದ ತೆಗೆದುಹಾಕುವುದು ಮತ್ತು ಕಿರುಕುಳ ಕೊಡುವುದು ನಿರಂತರವಾಗಿ ನಡೆಯುತ್ತಿದೆ. ಹಾಗಾಗಿ ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ ಭದ್ರತೆಗಾಗಿ ಒತ್ತಾಯಿಸಿದರು .
ರಾಜ್ಯ ಜಂಟಿ ಕಾರ್ಯದರ್ಶಿಯಾದ ಹುಲುಗಪ್ಪ ಚಲವಾದಿ ಮಾತನಾಡಿ
೨೨-೦೫-೨೦೨೬ ರಂದು ರಾಜ್ಯ ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಪರಿಷ್ಕರಣೆ ಕರಡು ಅಂತಿಮ ಅಧಿಸೂಚನೆ ಹೊರಡಿಸಿರುವ ಕನಿಷ್ಠ ವೇತನವನ್ನು ವಿಳಂಬ ಮಾಡದೆ ತಕ್ಷಣ ಜಾರಿ ಮಾಡಬೇಕು. ಪರಿಷ್ಕರಣೆ ಮಾಡಿರುವ ಕನಿಷ್ಠ ವೇತನವನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು.
ತಿಂಗಳಿಗೆ ಕನಿಷ್ಠ ವೇತನ ಮಾಸಿಕ ರೂ.೩೬ ಸಾವಿರ ಕೊಡಬೇಕು. ಎಲ್ಲಾ ಹಾಸ್ಟೆಲ್ ಮತ್ತು ವಸತಿ ನಿಲಯ ಹೊರಗುತ್ತಿಗೆ ಸಿಬ್ಬಂದಿಗಳಿಗೆ ನಿವೃತ್ತಿವರೆಗೆ ಸೇವಾ ಭದ್ರತೆ ಮತ್ತು ಕೆಲಸ ಮಾಡುವ ಸ್ಥಳಗಳಲ್ಲೇ ಖಾಯಂ ನೇಮಕ ಮಾಡಬೇಕು.ನೇರವಾಗಿ ಇಲಾಖೆಯಿಂದ ವೇತನ ಕೊಡಬೇಕು.ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ, ಐ.ಡಿ.ಕಾರ್ಡ್, ಸರ್ವೀಸ್ ಸರ್ಟಿಫಿಕೇಟ್, ESI ಮತ್ತು PF ಹಣ ತುಂಬಿದ ರಶೀದಿ ಕೊಡಬೇಕು.
ಕಾರ್ಮಿಕ ಕಾನೂನು ಪ್ರಕಾರ ಕಡ್ಡಾಯವಾಗಿ ವಾರಕ್ಕೆ ಒಂದು ರಜೆ ಕೊಡಬೇಕು. ಕೆಲಸದ ಸಮಯ ನಿಗಧಿ ಆಗಬೇಕು. ಅಪಘಾತವಾದಾಗ ಇಲಾಖೆಯೆ ಚಿಕಿತ್ಸೆ ಹಾಗೂ ಪರಿಹಾರ ಕೊಡಬೇಕು.
ಪ್ರತಿ ತಿಂಗಳು ೫ನೇ ತಾರೀಖು ಸಂಬಳ ಕೊಡಬೇಕು. ಬಾಕಿ ಇರುವ ಸಂಬಳವನ್ನು ತಕ್ಷಣ ಪಾವತಿ ಮಾಡಬೇಕು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ರಾತ್ರಿ ಕಾವಲುಗಾರರನ್ನು ನೇಮಿಸಬೇಕು. ಹಿಂದುಳಿದ ವರ್ಗಗಳ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿಗಳ ಸಂಖ್ಯೆ ಕಡಿತ ಮಾಡಿರುವ ಆದೇಶ ರದ್ದಾಗಬೇಕು. ೫೦ ವಿದ್ಯಾರ್ಥಿಗಳಿಗೆ ೩ ಜನ ಸಿಬ್ಬಂದಿಯಂತೆ ಹಿಂದಿನ ಪದ್ದತಿ ಮುಂದುವರಿಸಬೇಕು.ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ೨೦೧೭ ರ ನಂತರ ಪ್ರಾರಂಭ ಮಾಡಿದ ವಸತಿ ಶಾಲೆಗಳಿಗೆ ಸಿಬ್ಬಂಧಿಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು ಹಾಗೂ ಗದಗ ಜಿಲ್ಲೆಯ ಎಲ್ಲಾ ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗಳನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ಎಲ್ಲರನ್ನೂ ತರಬೇಕು.
ಬಿಸಿಎಂ ಇಲಾಖೆಯಲ್ಲಿ ಕೆಲಸ ಕಳೆದು ಕೊಂಡಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ಮತ್ತೆ ಮರು ನೇಮಕ ಮಾಡಿಕೊಳ್ಳಬೇಕು. ಹೊಸದಾಗಿ ಪ್ರಾರಂಭ ಮಾಡುವ ಹಾಸ್ಟೆಲ್ಗಳಿಗೆ ಕಡ್ಡಾಯವಾಗಿ ಕೆಲಸಕ್ಕೆ ತೆಗೆದುಕೊಳ್ಳಬೇಕು.
ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಚತಾಗಾರರಿಂದ ಶೌಚಾಲಯ ಸ್ವಚ್ಛ ಮಾಡಿಸಬಾರದು.
ವಸತಿ ನಿಲಯ ಮತ್ತು ಹಾಸ್ಟೆಲ್ಗಳಿಗೆ ವಾರ್ಡನ್ ರವರು ಮಕ್ಕಳ ಅಡುಗೆಗೆ ಅಗತ್ಯವಾಗಿ ಬೇಕಾದ ಗುಣಮಟ್ಟದ ಅಹಾರ ಸಾಮಾಗ್ರಿಗಳನ್ನು ಸರಿಯಾದ ಪ್ರಮಾಣದಲ್ಲಿ ತಂದು ಕೊಡಬೇಕು. ನಿವೃತ್ತಿ ನಂತರ ಜೀವನ ನಿರ್ವಹಣೆಗೆ ೧೦ ಲಕ್ಷ ಪರಿಹಾರ ಕೊಡಬೇಕು.
ಕೃಷಿ ಕೂಲಿಕಾರ ಸಂಘದ ಜಿಲ್ಲಾ ಮುಖಂಡರಾದ ಬಾಲು ರಾಠೋಡ ಮಾತನಾಡಿ ಸುಪ್ರೀಂಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು.
ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ತಕ್ಷಣ ಜಾರಿ ಮಾಡಬೇಕು.
ಮಹಿಳಾ ಹೊರಗುತ್ತಿಗೆ ನೌಕರರಿಗೆ ಋತುಚಕ್ರದ ರಜೆಯನ್ನು ಕೊಡಬೇಕು.
ಮಹಿಳಾ ಹೊರಗುತ್ತಿಗೆ ನೌಕರರಿಗೆ ವೇತನ ಸಹಿತ ಹೆರಿಗೆ ರಜೆ ನೀಡಬೇಕು.
ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ದಸರಾ ರಜೆಯ ೧೫ ದಿನ ಮತ್ತು ಬೇಸಿಗೆ ರಜೆ ಏಪ್ರಿಲ್, ಮೇ ತಿಂಗಳ ಸಂಬಳ ಕೊಡಬೇಕು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಲಕ್ಷೆಶ್ವರ ದಲ್ಲಿ ಹೊರಗುತ್ತಿಗೆ ಸಿಬ್ಬಂದಿಯನ್ನು ಯಾವುದೇ ನೋಟಿಸ ಇಲ್ಲದೆ ಕೆಲಸದಿಂದ ತಗೆದುಹಾಕಿದ್ದು ಅವರನ್ನು ಕೆಲಸದಲ್ಲಿ ಮುಂದುವರೆಸಬೇಕು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಮುಂಡರಗಿ ದಲ್ಲಿ ಹೊರಗುತ್ತಿಗೆ ಸಿಬ್ಬಂದಿಯನ್ನು ಯಾವುದೇ ನೋಟಿಸ ಇಲ್ಲದೆ ಕೆಲಸದಿಂದ ತಗೆದುಹಾಕಿದ್ದು ಅವರನ್ನು ಕೆಲಸದಲ್ಲಿ ಮುಂದುವರೆಸಬೇಕು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕ ವಿಸ್ತೀಣಾಧಿಕಾರಿಗಳು ಮುಂಡರಗಿ ಇವರು ಹೊರಗುತ್ತಿಗೆ ಸಿಬ್ಬಂದಿಗಳಿಗೆ ಕಿರುಕುಳ & ಏಕಾಏಕಿಯಿಂದ ಹೊರಗುತ್ತಿಗೆ ಸಿಬ್ಬಂದಿಗಳನ್ನು ಕೆಲಸದಿಂದ ತಗೆದು ಹಾಕುತ್ತಿದ್ದು ಇವರ ಮೇಲೆ ಕಾನೂನು ಕ್ರಮ ತಗೆದುಕೊಳ್ಳಬೇಕು.ಕಿತ್ತೂರರಾಣಿ ಚನ್ನಮ್ಮ ವಸತಿ ಶಾಲೆ ಶಿರಹಟ್ಟಿ ಇವರು ಹೊರಗುತ್ತಿಗೆ ಸಿಬ್ಬಂದಿಗಳನ್ನು ಕೆಲಸದಿಂದ ತಗೆದುಹಾಕಿದ್ದು ಅವರನ್ನು ಮರಳಿ ಕೆಲಸದಲ್ಲಿ ಮುಂದುವರೆಸಬೇಕು ಎಂದು ಒತ್ತಾಯಿಸಿದರು
ಭೀಮಶೆಟ್ಟಿ ಯಂಪಳ್ಳಿ ಹುಲಗಪ್ಪ ಚಲವಾದಿ ಬಾಲು ರಾಠೋಡ . ಮಹಾಂತೇಶ ಶಿರಸೂರ
ರಾಮಚಂದ್ರ ಕಡೆಮನಿ ಮಹ್ಮದಸಾಬ ಕರ್ನಾಚೆ ಬಸವರಾಜ ಪೂಜಾರಿ
ಮಹಾಂತೇಶ ಅಂಗಡಿ ಮಂಜುನಾಥ ವಡ್ಡರ ಹಣಮಂತ ವಡ್ಡರ
ರಾಘವೇಂದ್ರ ಆದೋನಿ ದುರಗಮ್ಮ ವಡ್ಡರ ಕಸ್ತೂರಿ ಅಂಜಗಿ.ಅರ್ಜುನ ತಳವಾರ. ಹನಮಕ್ಕ ಮಾದರ ರೂಪಣ್ಣ ಜಾಟೋತರ ಮುಂತಾದವರು ಭಾಗವಹಿಸಿದ್ದರು



Post a Comment