-->
Bookmark

Gajendragad : ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣೆ : 137 ಮತಕೇಂದ್ರಗಳಲ್ಲಿ ಮತದಾನ

Gajendragad : ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣೆ : 137 ಮತಕೇಂದ್ರಗಳಲ್ಲಿ ಮತದಾನ 

ಗಜೇಂದ್ರಗಡ : (Oct_23_2026)
ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಇಂದು (ಅಕ್ಟೋಬರ್ 23, 2026) ಮತದಾನ ನಡೆಯುತ್ತಿದೆ. ಬೆಳಿಗ್ಗೆ 8ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ. ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡದಲ್ಲಿ ಒಟ್ಟು 137 ಮತಕೇಂದ್ರಗಳಲ್ಲಿ ಮತದಾನ ನಡೆಯುತ್ತಿದೆ. 
97,398 ಮತದಾರಿರಿದ್ದು, ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯಿಂದ ಎಸ್.ವಿ. ಸಂಕನೂರ್ ಮತ್ತು ಕಾಂಗ್ರೆಸ್ ನಿಂದ ಮೋಹನ್ ಲಿಂಬಿಕಾಯಿ ಅವರ ಮೇಲೆ ಹೆಚ್ಚಿನ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಇದೇ ಅಕ್ಟೋಬರ್ 27 ರಂದು ಮತ ಎಣಿಕೆ ನಡೆಯಲಿದೆ. 

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಎರಡು ಮತ ಕೇಂದ್ರಗಳಿದ್ದು, ಮತದಾನ ನಡೆಯುತ್ತಿದೆ.
Post a Comment

Post a Comment